ಕರ್ನಾಟಕ

karnataka

ETV Bharat / state

ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಯತ್ನ ಆರೋಪ: 20ಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರ ವಿರುದ್ಧ ದೂರು - chikmagaluru police station

ಕಾಂಗ್ರೆಸ್​ ಕಾರ್ಯಕರ್ತರು ದೂರು ಕೊಡುವ ನೆಪದಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ,ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಚಿಕ್ಕಮಗಳೂರು ಜಿಲ್ಲಾ ಎಸ್ಪಿಗೆ ದೂರು ನೀಡಿದ ಹಿನ್ನೆಲೆ, ಪೊಲೀಸರು 20ಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಎಫ್​ಐಆರ್ ದಾಖಲಿಸಿದ್ದಾರೆ.

complaints-against-more-than-20-congress-workers-in-chikmagaluru-police-station
ದೂರು ಕೊಡುವ ನೆಪದಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಆರೋಪ: 20ಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ದೂರು ದಾಖಲು

By

Published : Jan 9, 2020, 10:02 PM IST

ಚಿಕ್ಕಮಗಳೂರು:ಕಾಂಗ್ರೆಸ್​ ಕಾರ್ಯಕರ್ತರು ದೂರು ಕೊಡುವ ನೆಪದಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಚಿಕ್ಕಮಗಳೂರು ಜಿಲ್ಲಾ ಎಸ್ಪಿಗೆ ದೂರು ನೀಡಿದ ಹಿನ್ನೆಲೆ, ಪೊಲೀಸರು 20ಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಎಫ್​ಐಆರ್ ದಾಖಲಿಸಿದ್ದಾರೆ.

ದೂರು ಕೊಡುವ ನೆಪದಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆ ಆರೋಪ: 20ಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ದೂರು ದಾಖಲು

ಕಳೆದ ಎರಡೂ ದಿನಗಳ ಹಿಂದೆ ಸಂಸದೆ ಶೋಭ ಕರಂದ್ಲಾಜೆ ಜಿಲ್ಲಾ ಪಂಚಾಯತ್​​ನಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಲು ಸಭೆಗೆ ಹೋಗುತ್ತಿದ್ದ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಗೇಟ್​ನ ಮುಂಭಾಗದಲ್ಲಿ ಬೆಲೆಗಳ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಶೋಭ ಕರಂದ್ಲಾಜೆ ಗೇಟ್​​ ಮುಂಭಾಗ ಬರುತ್ತಿದ್ದಂತೆ ಕಾಂಗ್ರೆಸ್​ ಮಹಿಳಾ ಕಾರ್ಯಕರ್ತರು ಮನವಿ ಕೊಡುವ ನೆಪದಲ್ಲಿ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಜಿಲ್ಲಾ ಎಸ್​ಪಿ ಅವರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಇಂದು ನಗರ ಪೋಲಿಸ್ ಠಾಣೆಯಲ್ಲಿ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಂಶುಮತ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಎಐಸಿಸಿ ಕಾರ್ಯದರ್ಶಿ ಸಂದೀಪ್ ಸೇರಿದಂತೆ 20 ಕ್ಕೂ ಹೆಚ್ಚು ಪ್ರತಿಭಟನಾ ನಿರತರ ಎಫ್​ಐಆರ್ ದಾಖಲಾಗಿದೆ.

ABOUT THE AUTHOR

...view details