ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಟಿ ರವಿ ಮನೆಗೆ ಮುತ್ತಿಗೆ ಯತ್ನ.. - ಈಟಿವಿ ಭಾರತ ಕರ್ನಾಟಕ

ಸಿಟಿ ರವಿ, ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿ ಕಾಂಗ್ರೆಸ್​​ ಕಾರ್ಯಕರ್ತರು ಶಾಸಕ ಸಿಟಿ ರವಿ ಮನೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದಾರೆ.

Kn_ckm
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಟಿ ರವಿ ಮನೆ ಮುತ್ತಿಗೆ ಯತ್ನ

By

Published : Dec 3, 2022, 4:07 PM IST

Updated : Dec 5, 2022, 2:09 PM IST

ಚಿಕ್ಕಮಗಳೂರು:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಶಾಸಕ ಸಿ ಟಿ ರವಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿ ಅವರ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ತಾಲೂಕು ಕಚೇರಿಯಿಂದ ಮೆರವಣಿಗೆ ಮೂಲಕ ಹೋಗಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ ಟಿ ರವಿ ಮನೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕುವ ಯತ್ನ ನಡೆದಿತ್ತು. ಪ್ರತಿಭಟನಾಕಾರರನ್ನ ರಸ್ತೆ ಮಧ್ಯೆಯೇ ಪೊಲೀಸರು ತಡೆದಿದ್ದಾರೆ. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಸಿ.ಟಿ ರವಿ ಮನೆ ರಸ್ತೆ ಮಧ್ಯೆ ನಿಂತು ಕಾಂಗ್ರೆಸ್ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.

ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಟಿ ರವಿ ಮನೆಗೆ ಮುತ್ತಿಗೆ ಯತ್ನ

ಅಲ್ಲದೇ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದು, ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ ಸಮರ ನಡೆದಿದ್ದು ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಬಳಿಕ ಶಾಸಕ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರೆ, ಬಿಜೆಪಿ ಕಾರ್ಯಕರ್ತರು ಸಿಟಿ ರವಿ ಪರ ಘೋಷಣೆ ಕೂಗಿದರು. ಇನ್ನು ಶಾಸಕರ ಮನೆ ಮುಂದೆ ಪೊಲೀಸ್ ಕಾವಲು ಹಾಕಲಾಗಿದೆ.

ಇದನ್ನೂ ಓದಿ:ದಲಿತ, ಮುಸ್ಲಿಂ ಅಲ್ಲ.. ಕುಮಾರಸ್ವಾಮಿಯೇ ನಮ್ಮ ಮುಖ್ಯಮಂತ್ರಿ : ಸಿಎಂ ಇಬ್ರಾಹಿಂ

Last Updated : Dec 5, 2022, 2:09 PM IST

ABOUT THE AUTHOR

...view details