ಕರ್ನಾಟಕ

karnataka

ETV Bharat / state

ಸಾರ್ವಜನಿಕರಿಗೆ ಪ್ರಚೋದನೆ ಆರೋಪ: ಬಿಜೆಪಿ ನಾಯಕರ ವಿರುದ್ಧ ದೂರು

ಕೋವಿಡ್​​ ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ತೇಜೋವಧೆ ಮಾಡುವುದು ಸರಿಯಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

congress-filed-a-complaint-against-bjp-leaders
ಸಾರ್ವಜನಿಕರಿಗೆ ಪ್ರಚೋದನೆ ಆರೋಪ: ಬಿಜೆಪಿ ನಾಯಕರ ವಿರುದ್ಧ ದೂರು

By

Published : May 20, 2021, 1:24 AM IST

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಚಿಹ್ನೆ ನಕಲು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಸಾರ್ವಜನಿಕರನ್ನು ಪ್ರಚೋದಿಸುವಂತೆ ಟ್ವೀಟ್ ಮಾಡಿದ ಆರೋಪ ಕೇಳಿಬಂದಿದ್ದು, ಬಿಜೆಪಿ ಮುಖಂಡರ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಬಿತ್​ ಪಾತ್ರ, ಅಭಿನವ್ ಸೆಖ್ರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ವಿರುದ್ಧ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಪಕ್ಷ ಮತ್ತು ಯುವ ಕಾಂಗ್ರೆಸ್ ವಿಭಾಗ ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಸೋಂಕಿತರಿಗೆ ನೆರವಾಗುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ತೇಜೋವಧೆ ಮಾಡುವುದು ಸರಿಯಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಕೋವಿಡ್ ಆತಂಕ: ಬೆರಳಚ್ಚು ಹಾಜರಾತಿ ಕೈಬಿಡಲು ಕೆಪಿಸಿಎಲ್ ನೌಕರರ ಪ್ರತಿಭಟನೆ

ಕೋವಿಡ್ ಸಂಕಷ್ಟದ ಸ್ಥಿತಿಯಲ್ಲಿ ಆಸ್ಪತ್ರೆಗೆ ಸೋಂಕಿತರನ್ನು ಸೇರಿಸುವುದು, ಜೀವರಕ್ಷಕ ಔಷಧಿ ಮತ್ತು ಆಮ್ಲಜನಕದ ಪೂರೈಕೆಯ ಜೊತೆಗೆ ಸೋಂಕಿತರು ಮೃತಪಟ್ಟಾಗ ಅವರ ಅಂತಿಮ ಸಂಸ್ಕಾರವನ್ನು ಮಾಡುವ ಮೂಲಕ ಸರ್ಕಾರಕ್ಕೆ ಕೊರೊನಾ ಎದುರಿಸಲು ಕಾಂಗ್ರೆಸ್​ ಸಾಥ್ ನೀಡಿದೆ. ಈ ವೇಳೆ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವಾಗುತ್ತಿದೆ ಎಂದು ದೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಮತ್ತು ಸಂಶೋಧನಾ ವಿಭಾಗದ ದಾಖಲೆಗಳನ್ನು ನಕಲು ಮಾಡಿ ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ಎಂದು ಬಿಂಬಿಸಿ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದು ಕೂಡಲೇ ಇವರ ಮೇಲೆ ಕ್ರಮ ಜರುಗಿಸಬೇಕು ದೂರುದಾರರು ಆಗ್ರಹಿಸಿದ್ದಾರೆ.

ABOUT THE AUTHOR

...view details