ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೆಂಪಲ್ ರನ್ ನಡೆಸಿದ್ದಾರೆ. ಜಿಲ್ಲೆಯಲ್ಲಿನ ದೇವಸ್ಥಾನ, ಮಠಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆದಿದ್ದಾರೆ. ಅಲ್ಲದೇ ಹಿಂದೂ-ಮುಸ್ಲಿಮರ ವಿವಾದಿತ ಕೇಂದ್ರ ಇನಾಂ ದತ್ತಾತ್ರೆಯ ಬಾಬಾಬುಡನ್ ಗಿರಿ ದರ್ಗಾಕೂ ಭೇಟಿ ನೀಡಿದ್ದಾರೆ.