ಕರ್ನಾಟಕ

karnataka

ETV Bharat / state

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ - ಗಾಯಿತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ(congress mlc candidate Gayathri Shanthe Gowda) ಕಾರ್ಯಕರ್ತರು ಹಾಗು ಪಕ್ಷದ ಮುಖಂಡರೊಂದಿಗೆ ತೆರಳಿ ಜಿಲ್ಲಾಧಿಕಾರಿ ರಮೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

Gayathri Shanthe Gowda To File Nomination
ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

By

Published : Nov 20, 2021, 4:43 PM IST

ಚಿಕ್ಕಮಗಳೂರು:ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ(legislative council election) ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರಿಗೆ ಇಂದು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗಾಯಿತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

ಗಾಯಿತ್ರಿ ಶಾಂತೇಗೌಡ(congress mlc candidate Gayathri Shanthe Gowda) ತಮ್ಮ ಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಈ ಹಿಂದೆ ಕಾಂಗ್ರೆಸ್‌ನಿಂದ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡು, ಮತ್ತೊಮ್ಮೆ ಸೋಲು ಕಂಡಿದ್ದರು. ಇದೀಗ 3ನೇ ಬಾರಿಗೆ ಮತ್ತೆ ಸ್ಪರ್ಧೆಗೆ ಇಳಿದಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಗಾಯತ್ರಿ ಶಾಂತೇಗೌಡ ಅವರಿಗೆ ಶೃಂಗೇರಿ ಶಾಸಕ ರಾಜೇಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ABOUT THE AUTHOR

...view details