ಚಿಕ್ಕಮಗಳೂರು :ಜಿಲ್ಲೆಯ ಕಡೂರಿನ ತಹಶೀಲ್ದಾರ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ, ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ. ಕಡೂರು ಭ್ರಷ್ಟರ ಕೂಟವಾಗಿದೆ ಎಂದು ಎಂಎಲ್ಎ ಬೆಳ್ಳಿ ಪ್ರಕಾಶ್, ದೇವರಾಜ್, ತಹಶೀಲ್ದಾರ್ ಉಮೇಶ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಗಂಭೀರ ಆರೋಪ ಮಾಡಿದರು.
ಚಿಕ್ಕಮಗಳೂರು: ತಹಸೀಲ್ದಾರ್ ಕಚೇರಿಗೆ ಬೀಗ ಜಡಿದು ಆಕ್ರೋಶ ಹೊರ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು - ಈಟಿವಿ ಭಾರತ ಕರ್ನಾಟಕ
ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ, ಬೀಗ ಜಡಿದು ಇಲ್ಲಿನ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದರು.
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶುಮಂತ್, ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ಪ್ರತಿಭಟನೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ :ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಲ್ ಇನ್ಸ್ಪೆಕ್ಟರ್