ಕರ್ನಾಟಕ

karnataka

ETV Bharat / state

ಈಶ್ವರಪ್ಪ ಬಂಧನಕ್ಕಾಗಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ.. ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ - Congress rally in chikkamagalur

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

congress-protests
ಕಾಂಗ್ರೆಸ್​ ಪ್ರತಿಭಟನೆ

By

Published : Apr 16, 2022, 1:33 PM IST

ಚಿಕ್ಕಮಗಳೂರು:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್​​ ಕಾರ್ಯಕರ್ತರಿಂದ ಬೃಹತ್​ ಪ್ರತಿಭಟನೆ ನಡೆಸಲಾಗುತ್ತಿದೆ.

ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಸಾಥ್​ ನೀಡುವ ಮೂಲಕ ಪ್ರತಿಭಟನೆಯನ್ನು ಕಿಚ್ಚನ್ನು ಹೊತ್ತಿಸಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್​ ಪಾರ್ಕ್ ಸರ್ಕಲ್​​ವರೆಗೂ ಪ್ರತಿಭಟನಾ ರ್ಯಾಲಿ ನಡೆದಿದ್ದು, ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಕಾಂಗ್ರೆಸ್​ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರದ ಜೊತೆಗೆ ಬೆಲೆ ಏರಿಕೆಯ ವಿರುದ್ಧವೂ ಘೋಷಣೆ ಕೂಗಲಾಯಿತು. ಅಲ್ಲದೇ, ಸಿಲಿಂಡರ್​ ಅಣಕು ಶವಯಾತ್ರೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.

ಓದಿ:ಈಶ್ವರಪ್ಪ ಬಂಧನಕ್ಕೆ ಆಗ್ರಹ: ಇಂದಿನಿಂದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ

For All Latest Updates

ABOUT THE AUTHOR

...view details