ಚಿಕ್ಕಮಗಳೂರು:ಜಿಲ್ಲಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರಸಭೆ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಲಾಯಿತು. ಕಳೆದ ಒಂದೂವರೆ ದಶಕದಿಂದ ಬಿಜೆಪಿಯು ಚಿಕ್ಕಮಗಳೂರು ನಗರಸಭೆಯ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲವೆಂದು ಕೈ ಕಾರ್ಯಕರ್ತರು ಆರೋಪಿಸಿದರು.
ಸಾರ್ವಜನಿಕರಿಂದ ಕಾಲ ಕಾಲಕ್ಕೆ ತೆರಿಗೆ ಸಂಗ್ರಹ ಮಾಡುತ್ತಿದ್ದಾರೆ. ಆದರೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಆಡಳಿತ ಪಕ್ಷವು ಸಂಪೂರ್ಣವಾಗಿ ವಿಫಲವಾಗಿದೆ. ನಗರದಲ್ಲಿ ನಡೆಸಿರುವ ಬಹುತೇಕ ಕಾಮಗಾರಿಗಳು, ಸಂಪೂರ್ಣವಾಗಿ ಕಳಪೆಯಾಗಿವೆ. ಯಗಚಿ ಜಲಾಶಯ ತುಂಬಿದ್ದರೂ ನಗರದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ ಎಂದು ಅವರು ಆರೋಪಿಸಿದರು.