ಕರ್ನಾಟಕ

karnataka

ETV Bharat / state

ಕೊರೊನಾ ಜಾಗೃತಿಗೆ ವಿಭಿನ್ನ ಮಾರ್ಗ... ಬಾಳೆಹೊನ್ನೂರು ಪೊಲೀಸರಿಂದ ಬೀದಿ ನಾಟಕ - chikkamagalur latest news

ವಿಶ್ವದಾದ್ಯಂತ ಶಾಪವಾಗಿ ಕಾಡುತ್ತಿರುವ ಕೊರೊನಾ ವೈರಸ್​ ಮಹಾಮಾರಿ ವಿರುದ್ಧ ಪೊಲೀಸರು ಭಿನ್ನ ವಿಭಿನ್ನ ಪ್ರಯತ್ನಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಅದರಲ್ಲೂ ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಹಾಮಾರಿ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

corona awareness program
ಬೀದಿ ನಾಟಕ ಪ್ರದರ್ಶಿಸಿದ ಪೊಲೀಸರು

By

Published : Apr 26, 2020, 6:54 PM IST

ಚಿಕ್ಕಮಗಳೂರು:ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರು ಬೀದಿ ನಾಟಕ ಪ್ರದರ್ಶಿಸುವ ಮೂಲಕ ಮಹಾಮಾರಿ ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ವಿಶ್ವದಾದ್ಯಂತ ಶಾಪವಾಗಿ ಕಾಡುತ್ತಿರುವ ಕೊರೊನಾ ವೈರಸ್​ ಮಹಾಮಾರಿ ವಿರುದ್ಧ ಪೊಲೀಸರು ವಿಭಿನ್ನ ಪ್ರಯತ್ನಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಬೀದಿ ನಾಟಕ ಪ್ರದರ್ಶಿಸಿದ ಪೊಲೀಸರು

ಕೊರೊನಾ ಸಂಹಾರ ಮಾಡಲು ಸಾಮಾಜಿಕ ಅಂತರ ಪಾಲಿಸಿ ಎಂದು ತಮ್ಮ ನಾಟಕದ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ಅರಿವುದು ಮೂಡಿಸಿದರು. ನಗರದ ಪ್ರಮುಖ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಾರ್ವಜನಿಕರು ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳು, ಕೊರೊನಾ ವೈರಸ್ ಉಂಟು ಮಾಡುತ್ತಿರುವ ಹಾನಿಯ ಕುರಿತು ಸಾರ್ವಜನಿಕರಿಗೆ ಎಳೆ ಎಳೆಯಾಗಿ ಬಿಡಿಸಿ ಮನ ಮುಟ್ಟುವಂತೆ ನಾಟಕ ಪ್ರದರ್ಶಿಸಿದರು.

ABOUT THE AUTHOR

...view details