ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ಬಲಿಯಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 52 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಮಹಿಳೆ ಬಲಿ - ಕೊರೊನಾ ಸೋಂಕಿಗೆ ಮಹಿಳೆ ಬಲಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 52 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಕೊರೊನಾ ಸೋಂಕಿಗೆ ಮಹಿಳೆ ಬಲಿ
ಇತ್ತೀಚೆಗಷ್ಟೇ ಇವರು ಬೆಂಗಳೂರಿನಿಂದ ನಗರಕ್ಕೆ ಬಂದಿದ್ದರು. ನಗರದ ಉಪ್ಪಳ್ಳಿ ನಿವಾಸದಲ್ಲೇ ಈ ಮಹಿಳೆ ಸಾವನ್ನಪ್ಪಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ದೃಢಪಡಿಸಿದೆ.
ಕೆಲ ದಿನಗಳ ಹಿಂದೆ ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಓರ್ವ ವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಮಹಿಳೆಯ ಸಾವಿನಿಂದ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಎರಡಕ್ಕೇರಿದೆ.