ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೋವಿಡ್ ಅಬ್ಬರಿಸಿದೆ. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಇದುವರೆಗೆ ಒಟ್ಟು 40 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗು ನಾಲ್ವರು ಸಿಬ್ಬಂದಿಯಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, 418 ವಿದ್ಯಾರ್ಥಿಗಳು, ಸಿಬ್ಬಂದಿಯ ಸ್ವ್ಯಾಬ್ ಅನ್ನು ಆರೋಗ್ಯ ಇಲಾಖೆ ಪಡೆದಿತ್ತು. ಆ ಪೈಕಿ ಈವರೆಗೆ 40 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ.