ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ದಿನ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1614 ಕ್ಕೆ ಏರಿಕೆಯಾಗಿದೆ. ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 675 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 45 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಸಂಗ್ರಹ ಚಿತ್ರ
ಚಿಕ್ಕಮಗಳೂರು ತಾಲೂಕಿನಲ್ಲಿ 37, ಕಡೂರು ತಾಲೂಕಿನಲ್ಲಿ 02, ತರೀಕೆರೆ ತಾಲೂಕಿನಲ್ಲಿ 06, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದ್ದು, ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1614ಕ್ಕೆ ಏರಿಕೆಯಾಗಿದ್ದು, ಒಟ್ಟು 908 ಸಕ್ರಿಯ ಪ್ರಕರಣಗಳಿವೆ.