ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 239 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,201 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 209 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 3,517 ಜನ ಸೋಂಕಿತರು, ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 122, ಕಡೂರು ತಾಲೂಕಿನಲ್ಲಿ 19, ತರೀಕೆರೆ ತಾಲೂಕಿನಲ್ಲಿ 45, ಮೂಡಿಗೆರೆ ತಾಲೂಕಿನಲ್ಲಿ 26, ಶೃಂಗೇರಿ ತಾಲೂಕಿನಲ್ಲಿ 09, ಕೊಪ್ಪ ತಾಲ್ಲೂಕಿನಲ್ಲಿ 07, ಎನ್,ಆರ್,ಪುರ ತಾಲೂಕಿನಲ್ಲಿ 11 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಇಂದು ಈ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 87 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಇನ್ನು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,201 ಕ್ಕೆ ಏರಿಕೆಯಾಗಿದ್ದು, ಒಟ್ಟು 1,597 ಸಕ್ರಿಯ ಪ್ರಕರಣಗಳಿವೆ.