ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕು ತಡೆಗೆ ಕೈಗೊಂಡ ಕ್ರಮ:'ಈಟಿವಿ ಭಾರತ' ಜೊತೆ ಜಿಲ್ಲಾಧಿಕಾರಿ ಮಾತು

ತಾಲೂಕು ಮಟ್ಟದಲ್ಲಿ ಪೊಲೀಸರಿಗೆ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಹೆಚ್ಚು ಜನರು ಸೇರುವ ಜಾತ್ರೆ, ಸಭೆ-ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

corona-infection-prevention
'ಈಟಿವಿ ಭಾರತ' ಜೊತೆ ಜಿಲ್ಲಾಧಿಕಾರಿ ಮಾತು

By

Published : Mar 23, 2020, 8:31 PM IST

Updated : Mar 23, 2020, 8:46 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು 'ಈಟಿವಿ ಭಾರತ' ಜೊತೆ ವೈರಸ್ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಬಗ್ಗೆ ಸುದೀರ್ಘವಾಗಿ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯಲಾಗುತ್ತಿದೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್​​ಗಳಿಗೆ ಬರುವ ಪ್ರವಾಸಿಗರನ್ನು ಕರೆದುಕೊಳ್ಳಬಾರದು ಎಂದು ಮಾಲೀಕರಿಗೆ ಮಾಹಿತಿ ರವಾನೆ ಮಾಡಲಾಗಿದೆ ಎಂದರು.

'ಈಟಿವಿ ಭಾರತ' ಜೊತೆ ಜಿಲ್ಲಾಧಿಕಾರಿ ಮಾತು

ಹೋಟೆಲ್​ಗಳಲ್ಲಿ ಕೂತು ಊಟ ಮಾಡಬಾರದು. ಪಾರ್ಸಲ್​ ಮಾತ್ರ ತೆಗೆದುಕೊಂಡು ಹೋಗಬಹುದು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೆಚ್ಚು ಜನರು ಬರದಂತೆ ನಿರ್ಬಂಧಿಸಲಾಗಿದೆ. ಖಾಸಗಿ ಬಸ್ ಸಂಚಾರ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಅದರ ಸಂಚಾರ ಕೂಡ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.

ಜನತಾ ಕರ್ಫ್ಯೂ ಮುಂದುವರಿಸುವ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಒಂದು ವೇಳೆ ಆದೇಶ ಬಂದರೆ ಮತ್ತೆ ಕರ್ಫ್ಯೂ ಮುಂದುವರೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Last Updated : Mar 23, 2020, 8:46 PM IST

ABOUT THE AUTHOR

...view details