ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಈವರೆಗೆ 53 ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ 27 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಮಗಳೂರಲ್ಲಿ ಹೊಸ 3 ಸೋಂಕಿತರು ಪತ್ತೆ ತರೀಕೆರೆ ತಾಲ್ಲೂಕಿನ ಅಜ್ಜಂಪುರ ಮೂಲದ ಓರ್ವ ವೃದ್ಧೆ ಕೊರೊನಾ ವೈರಸ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಇಂದು ಮತ್ತೆ ಮೂರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 35 ವರ್ಷದ ಪುರುಷ, 37 ವರ್ಷದ ಪುರುಷ, 44 ವರ್ಷದ ಪುರುಷ ಸೋಂಕಿತರಾಗಿದ್ದಾರೆ.
ಮೂವರು ಬೆಂಗಳೂರು ಪ್ರಯಾಣ ಮಾಡಿ ಬಂದವರಾಗಿದ್ದು, ಚಿಕ್ಕಮಗಳೂರು ತಾಲೂಕಿಗೆ ಸೇರಿದವರಾಗಿದ್ದಾರೆ. ಸೋಂಕಿತರು ವಾಸ ಮಾಡುತ್ತಿದ್ದ ಪ್ರದೇಶಗಳನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್‌ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ.
ಜಿಲ್ಲಾ ಆರೋಗ್ಯ ಇಲಾಖೆ ಮೂವರ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಹುಡುಕುವ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಈ ಮೂವರು ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 25 ಸಕ್ರಿಯ ಪ್ರಕರಣಗಳಿವೆ.