ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ: ಡಿಸಿ ಸ್ಪಷ್ಟನೆ

ಚಿಕ್ಕಮಗಳೂರು ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.

ಕೊರೊನಾ ಧೃಡ
ಕೊರೊನಾ ಧೃಡ

By

Published : Jan 5, 2021, 5:45 PM IST

ಚಿಕ್ಕಮಗಳೂರು: ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಬಗಾದಿ ಗೌತಮ್

ಕಡೂರು, ಚಿಕ್ಕಮಗಳೂರು ತಾಲೂಕಿನ ತಲಾ iಬ್ಬರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು‌ ಪತ್ತೆಯಾಗಿದ್ದು, ವಿದ್ಯಾರ್ಥಿಗಳ ಜೊತೆ ಮತ್ತಿಬ್ಬರು ಶಿಕ್ಷಕರಿಗೂ ಸೋಂಕು ದೃಢಪಟ್ಟಿದೆ. ನಿನ್ನೆಯಷ್ಟೇ ಜಿಲ್ಲೆಯ ಮೂವರು ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ವಿದ್ಯಾರ್ಥಿಗಳಲ್ಲೂ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 4 ವಿದ್ಯಾರ್ಥಿಗಳು, 5 ಶಿಕ್ಷಕರಲ್ಲಿ ಸೋಂಕು ದೃಢವಾಗಿದೆ.

ABOUT THE AUTHOR

...view details