ಕರ್ನಾಟಕ

karnataka

ETV Bharat / state

ಕಾಫಿನಾಡಲ್ಲಿ ಇಂದು ಮತ್ತೆ ಮೂವರಲ್ಲಿ ಕೊರೊನಾ​​​​: ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ - corona news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್​ ಕಂಡು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

corona-positive-in-three-people-at-chikkamagalur
ಕಾಫಿನಾಡಲ್ಲಿ ಇಂದು ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್

By

Published : May 27, 2020, 2:56 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಹೊಸದಾಗಿ 3 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಐದು ದಿನಗಳ ಹಿಂದೆ ಮುಂಬೈನಿಂದ ಎನ್​​ಆರ್ ಪುರ ತಾಲೂಕಿಗೆ ಟೆಂಪೋ ಟ್ರಾವೆಲರ್ ಮೂಲಕ ಆಗಮಿಸಿದ್ದ 9 ಜನರಲ್ಲಿ 8 ಜನಕ್ಕೆ ಸೋಂಕು ಪತ್ತೆಯಾಗಿತ್ತು. ನಂತರ ಕುಟುಂಬದ ಎಲ್ಲಾ ಸದಸ್ಯರ ಗಂಟಲು ದ್ರವ, ರಕ್ತದ ಮಾದರಿ ಪರೀಕ್ಷೆಗಾಗಿ ಹಾಸನಕ್ಕೆ ಜಿಲ್ಲೆಗೆ ಕಳುಹಿಸಿಕೊಡಲಾಗಿದೆ.

31 ವರ್ಷದ ಪುರುಷ, 32 ವರ್ಷದ ಪುರುಷ, 35 ವರ್ಷದ ವ್ಯಕ್ತಿಯಲ್ಲಿ ಇಂದು ಸೋಂಕು ಪತ್ತೆಯಾಗಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಕಾರ್ಯ ಆರಂಭವಾಗಿದೆ. ಈ 3 ಜನ ಸೋಂಕಿತರನ್ನು ಚಿಕ್ಕಮಗಳೂರು ನಗರದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details