ಮಂಗಳೂರು/ಚಿಕ್ಕಮಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 619 ಕ್ಕೆ ಏರಿಕೆಯಾಗಿದೆ.
ಇಂದು 301 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 27,739 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 490 ಮಂದಿ ಗುಣಮುಖರಾಗಿದ್ದು, ಈವರೆಗೆ 23,413 ಮಂದಿ ಗುಣಮುಖರಾಗಿದ್ದಾರೆ. ಸದ್ಯ ವಿವಿಧ ಆಸ್ಪತ್ರೆಗಳಲ್ಲಿ 3,707 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 22,13,494 ಮಂದಿಯ ತಪಾಸಣೆ ನಡೆಸಲಾಗಿದ್ದು ಇದರಲ್ಲಿ 1,85,755 ನೆಗೆಟಿವ್ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ 7,561 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ರೂ. 8,96,375 ದಂಡ ವಸೂಲಿ ಮಾಡಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 92 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 11,164 ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 348 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು , ಈವರೆಗೂ ಜಿಲ್ಲೆಯಲ್ಲಿ ಒಟ್ಟು 9,546 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 38, ಕಡೂರು ತಾಲೂಕಿನಲ್ಲಿ 05, ಮೂಡಿಗೆರೆ ತಾಲೂಕಿನಲ್ಲಿ 14, ತರೀಕೆರೆ ತಾಲೂಕಿನಲ್ಲಿ 30, ಶೃಂಗೇರಿ ತಾಲೂಕಿನಲ್ಲಿ 03, ಕೊಪ್ಪದಲ್ಲಿ 01, ಎನ್ಆರ್ ಪುರ ತಾಲೂಕಿನಲ್ಲಿ 01 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 134 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,164 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,136 ಸಕ್ರಿಯ ಪ್ರಕರಣಗಳಿವೆ.