ಚಿಕ್ಕಮಗಳೂರು: ಕರ್ತವ್ಯನಿರತ ಆಶಾ ಕಾರ್ಯಕರ್ತೆಯೋರ್ವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಕೊರೊನಾ ವಾರಿಯರ್ ಹೋರಾಟ ನಡೆಸುತ್ತಿದ್ದಾರೆ.
ಅಜ್ಜಂಪುರ: ಬೈಕ್ ಅಪಘಾತದಲ್ಲಿ ಕೊರೊನಾ ವಾರಿಯರ್ಗೆ ಗಂಭೀರ ಗಾಯ - ಅಂಗನವಾಡಿ ಕಾರ್ಯಕರ್ತೆ ಪ್ರೇಮ
ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಮನೆಗೆ ಹಿಂತುರುಗುತ್ತಿದ್ದ ವೇಳೆ ಅಪಘಾತವಾಗಿ ಆಶಾ ಕಾರ್ಯಕರ್ತೆಯೋರ್ವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಪ್ರೇಮ(45) ಅಪಘಾತಕ್ಕೊಳಗಾದ ಮಹಿಳೆ. ಕೊರೊನಾ ಟಾಸ್ಕ್ ಫೋರ್ಸ್ ಸಭೆ ಮುಗಿಸಿ ಪತಿ ರುದ್ರಪ್ಪರೊಂದಿಗೆ ಮನೆಗೆ ಬರುತ್ತಿದ್ದ ವೇಳೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಬಳಿ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಪ್ರೇಮ ಅವರಿಗೆ ತೀವ್ರ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾರೆ. ಪತಿ ರುದ್ರಪ್ಪ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಪ್ರೇಮಾರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.