ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 159 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,893ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 159 ಜನರಲ್ಲಿ ಕೊರೊನಾ ಸೋಂಕು ಪತ್ತೆ - ಕೊರೊನಾ ಸುದ್ದಿ ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 159 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,893 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 215 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 4,458 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 108, ಕಡೂರು ತಾಲೂಕಿನಲ್ಲಿ 15, ತರೀಕೆರೆ ತಾಲೂಕಿನಲ್ಲಿ 11, ಮೂಡಿಗೆರೆ ತಾಲೂಕಿನಲ್ಲಿ 10, ಶೃಂಗೇರಿ ತಾಲೂಕಿನಲ್ಲಿ 06, ಕೊಪ್ಪ ತಾಲ್ಲೂಕಿನಲ್ಲಿ 02, ಎನ್.ಆರ್.ಪುರ ತಾಲೂಕಿನಲ್ಲಿ 07, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಇಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 98ಕ್ಕೆ ಏರಿಕೆಯಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,893 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,337 ಸಕ್ರಿಯ ಪ್ರಕರಣಗಳಿವೆ.