ಚಿಕ್ಕಮಗಳೂರು:ಕೊರೊನಾ ವೈರಸ್ ಭೀತಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಸ್ಥಳೀಯ ಸಂಸ್ಥೆಗಳ ನೇತೃತ್ವದಲ್ಲಿ ರಸ್ತೆಗಳು ಹಾಗೂ ಚರಂಡಿಗಳ ಸ್ಬಚ್ಛತೆ ಮಾಡಲಾಗುತ್ತಿದೆ.
ಕೊರೊನಾ ಭೀತಿ: ಚಿಕ್ಕಮಗಳೂರಿನಲ್ಲಿ ರಸ್ತೆ, ಚರಂಡಿಗಳ ಸ್ವಚ್ಛತೆ - ಚಿಕ್ಕಮಗಳೂರು ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ರಸ್ತೆಗಳ ಸ್ವಚ್ಛತೆಗೆ ಮುಂದಾಗಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಕೂಡ ಸಾಥ್ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪ್ರಮುಖ ರಸ್ತೆಗಳನ್ನು ಸ್ವಚ್ಛ ಮಾಡೋದಕ್ಕೆ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮುಂದಾಗಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಕೂಡ ಔಷಧಿ ಸಿಂಪಡಣೆ ಮಾಡಿದರು. ರಸ್ತೆ ಮೇಲಿನ ಸಂಪೂರ್ಣ ಕಸ ಗುಡಿಸಿ ನಂತರ ನೀರಿಗೆ ಬ್ಲೀಚಿಂಗ್ ಪೌಡರ್ ಹಾಕಿ ರಸ್ತೆ ಸ್ವಚ್ಛ ಮಾಡಲಾಗುತ್ತಿದೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ.
ಕೊರೊನಾ ಹರಡದಂತೆ ತಡೆಯಲು ಶುಚಿತ್ವ ಬಹಳ ಅಗತ್ಯ. ಜೊತೆಗೆ ನಮ್ಮ ಜಾಗ್ರತೆಯೂ ಮುಖ್ಯವಾಗಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.