ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 6 ಜನರಲ್ಲಿ ಕೊರೊನಾ ಪಾಸಿಟಿವ್ - coronavirus in chikkamagaluru

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಯಿಂದ ಈವರೆಗೂ ಒಟ್ಟು 51 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೊರೊನಾ ಪಾಸಿಟಿವ್
ಕೊರೊನಾ ಪಾಸಿಟಿವ್

By

Published : Jul 7, 2020, 11:54 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 6 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.

ಈ ದಿನ ಮೂರು ಜನರು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 51 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತರೀಕೆರೆ ತಾಲ್ಲೂಕಿನ ಅಜ್ಜಂಪುರ ಮೂಲದ, ಓರ್ವ ವಯೋವೃದ್ಧೆ ಕೊರೊನಾ ವೈರಸ್​ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಇಂದು 6 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು, 5 ಜನರು ಚಿಕ್ಕಮಗಳೂರು ತಾಲೂಕಿಗೆ ಸೇರಿದವರಾಗಿದ್ದು, ಓರ್ವ ಮೂಡಿಗರೆ ತಾಲೂಕಿಗೆ ಸೇರಿದ್ದವರಾಗಿದ್ದಾರೆ. 23 ವರ್ಷದ ಯುವತಿ, 40 ವರ್ಷದ ಮಹಿಳೆ, 52 ವರ್ಷದ ಪುರುಷ, 40 ವರ್ಷದ ಮಹಿಳೆ, 36 ವರ್ಷದ ಪುರುಷ, 21 ವರ್ಷದ ಯುವಕರಲ್ಲಿ ಸೋಂಕು ಪತ್ತೆಯಾಗಿದೆ. ಈ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ.

ಜಿಲ್ಲಾ ಆರೋಗ್ಯ ಇಲಾಖೆ ಈ ಸೋಂಕಿತರ ಜೊತೆ ಪ್ರಾರ್ಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಹುಡುಕುವ ಶೋಧ ಕಾರ್ಯ ಪ್ರಾರಂಭ ಮಾಡಿದ್ದು, ಕೊರೊನಾ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 100 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 48 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details