ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಸರಣಿ ಅಪಘಾತ: ದಂಪತಿ ಸಾವು, ಮಗು - ಕಾರು ಚಾಲಕನಿಗೆ ಗಂಭೀರ ಗಾಯ - Serial Road Accident

Serial Road Accident: ಚಿಕ್ಕಮಗಳೂರು - ಕಡೂರು ರಸ್ತೆಯಲ್ಲಿನ ಹಿರೇಗೌಜ ಎಂಬಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿದ್ದಾರೆ.

couple-died-in-serial-accident-in-chikkamagaluru
ಚಿಕ್ಕಮಗಳೂರಲ್ಲಿ ಸರಣಿ ಅಪಘಾತ: ದಂಪತಿ ಸಾವು, ಮಗು- ಕಾರು ಚಾಲಕನಿಗೆ ಗಂಭೀರ ಗಾಯ

By ETV Bharat Karnataka Team

Published : Sep 13, 2023, 10:33 PM IST

ಚಿಕ್ಕಮಗಳೂರು:ಕಾರು, ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್​ನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು - ಕಡೂರು ರಸ್ತೆಯಲ್ಲಿನ ಹಿರೇಗೌಜ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ದಂಪತಿಯ ಮಗು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದೆ.

ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38) ಹಾಗೂ ಮಾಜಿನಾ (33) ಸ್ಥಳದಲ್ಲೇ ಸಾವನ್ನಪ್ಪಿರುವ ದಂಪತಿ. ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿಯ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದೆ. ಕಾರು ಚಾಲಕ ಹರೀಶ್ ಎಂಬುವರಿಗೂ ಗಂಭೀರ ಗಾಯಗಳಾಗಿವೆ. ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ದಂಪತಿಯು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ:ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ (ಸೆ.12) ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಸಂಭವಿಸಿತ್ತು. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರು ಹಾಗೂ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್​ ನಡುವೆ ಅಪಘಾತ ಸಂಭವಿಸಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿತ್ತು.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ‌ 206ರಲ್ಲಿ ಕೆಲ ಗಂಟೆ ಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಭದ್ರಾವತಿ ನಿವಾಸಿಗಳಾಗಿದ್ದು, ತರಿಕೆರೆಯಿಂದ ಭದ್ರಾವತಿಗೆ ವಾಪಸ್ ಆಗುವಾಗ ದುರ್ಘಟನೆ ಸಂಭವಿಸಿತ್ತು. ಈ ಕುರಿತು ತರಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಿಯಂತ್ರಣ ತಪ್ಪಿ ಬೈಕ್​ಗೆ ಗುದ್ದಿದ ಕಾರು; ಸ್ಥಳದಲ್ಲೇ ಮೃತಪಟ್ಟ ಸವಾರ - ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ABOUT THE AUTHOR

...view details