ಚಿಕ್ಕಮಗಳೂರು :ಸ್ಕಾರ್ಪಿಯೋ ಕಾರಿನಲ್ಲಿ ಬಂದು ಸಿನಿಮಾ ಶೈಲಿಯಲ್ಲಿ ಖದೀಮರು ಹಸುವನ್ನು ಕದ್ದೊಯ್ದ ಘಟನೆ ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ.
ಸ್ಕಾರ್ಪಿಯೋ ಕಾರಿನಲ್ಲಿ ತುಂಬಿ ಸಿನಿಮಾ ಶೈಲಿಯಲ್ಲಿ ಹಸು ಕದ್ದೊಯ್ದ ಖದೀಮರು - ಚಿಕ್ಕಮಗಳೂರಿನ ಹೊರವಲಯದಲ್ಲಿ ಹಸು ಕಳ್ಳತನ
ಸ್ಕಾರ್ಪಿಯೋ ಕಾರಿನಲ್ಲಿ ಬಂದ ಖದೀಮರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಕದ್ದೊಯ್ದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ.
ಹಸು ಕದ್ದೊಯ್ಯುತ್ತಿರುವ ಸಿಸಿಟಿವಿ ದೃಶ್ಯ
ಮಧ್ಯರಾತ್ರಿ ಬಂದ ಖದೀಮರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವನ್ನು ಸ್ಕಾರ್ಪಿಯೋ ಕಾರಿನಲ್ಲಿ ತುಂಬಿ ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕರು ಕಾರನ್ನು ಹಿಂಬಾಲಿಸಿ ಸ್ವಲ್ಪ ದೂರದವರೆಗೆ ಓಡಿದೆ. ಖದೀಮರು ಹಸುವನ್ನು ಕದ್ದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.