ಕರ್ನಾಟಕ

karnataka

By

Published : Jun 19, 2020, 4:16 PM IST

Updated : Jun 19, 2020, 5:44 PM IST

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ನದಿಯಲ್ಲಿ ಮೊಸಳೆಯೊಂದು ಹೊರ ಬಂದಿದೆ. ಇದರಿಂದ ಆತಂಕ್ಕಕ್ಕೊಳಗಾದ ನದಿ ದಂಡೆಯಲ್ಲಿನ ಗ್ರಾಮಸ್ಥರು, ಸ್ಥಳೀಯ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Crocodile Found In Bhadra River
ಭದ್ರಾ ನದಿಯಲ್ಲಿ ಕಾಣಿಸಿಕೊಂಡ ಮೊಸಳೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ನದಿಯ ನೀರಿನ ಮಟ್ಟದಲ್ಲಿಯೂ ಸಹ ಏರಿಕೆಯಾಗಿದೆ. ಇದರಿಂದ ಇಲ್ಲಿನ ಬಾಳೆಹೊನ್ನೂರು ಸಮೀಪ ಭದ್ರಾ ನದಿಯಲ್ಲಿ ಮೊಸಳೆಯೊಂದು ನದಿಯ ಮಧ್ಯೆ ಇರುವ ಬಂಡೆಯ ಮೇಲೆ ಬಂದು ಬಿಸಿಲು ಕಾಯಿಸುತ್ತಾ ಮಲಗಿದ್ದ ದೃಶ್ಯ ಕಂಡು ಬಂತು.

ಭದ್ರಾ ನದಿಯಲ್ಲಿ ಕಾಣಿಸಿಕೊಂಡ ಮೊಸಳೆ

ಬಂಡೆ ಕಲ್ಲಿನ ಮೇಲೆ ಮಲಗಿರುವ ಮೊಸಳೆಯ ದೃಶ್ಯವನ್ನು ಸ್ಥಳೀಯರು ತಮ್ಮ ತಮ್ಮ ಮೊಬೈಲ್​ಗಳಲ್ಲಿ ಸೆರೆ ಹಿಡಿದಿದ್ದಾರೆ. ಮತ್ತೊಂದೆಡೆ ನದಿಯಲ್ಲಿ ಕಾಣಿಸಿಕೊಂಡ ಮೊಸಳೆಯಿಂದ ನದಿ ದಂಡೆಯಲ್ಲಿನ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ಭದ್ರಾ ನದಿಯಲ್ಲಿ ಕಾಣಿಸಿಕೊಂಡ ಮೊಸಳೆ

ಸ್ಥಳೀಯ ಅರಣ್ಯ ಇಲಾಖೆಗೆ ಜನರು ಈ ಬಗ್ಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಂಸದ ತ್ಯಾಜ್ಯವನ್ನು ನದಿಗೆ ಹಾಕುತ್ತಿರುವುದರಿಂದ ಮೊಸಳೆಗಳು ಮಾಂಸ ತಿನ್ನಲು ದಡಕ್ಕೆ ಬರುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೊಸಳೆ ಪ್ರತ್ಯಕ್ಷವಾಗಿರುವ ವಿಡಿಯೋ ವೈರಲ್​ ಆಗಿದೆ.

Last Updated : Jun 19, 2020, 5:44 PM IST

ABOUT THE AUTHOR

...view details