ಚಿಕ್ಕಮಗಳೂರು: ದತ್ತ ಮಾಲಾ ಉತ್ಸವ ಹಿನ್ನೆಲೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ಇತರೆ ಭಕ್ತಾಧಿಗಳು ನಗರದ ನಾರಾಯಣಪುರ ಬಡಾವಣೆಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಭಿಕ್ಷಾಟನೆ ಮಾಡಿ ಪಡಿ ಸಂಗ್ರಹಿಸಿದರು.
ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಸಂಘಟನೆಗಳು ಚಿಕ್ಕಮಗಳೂರಿನಲ್ಲಿ ದತ್ತಮಾಲಾ ಉತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಉತ್ಸವ ಹಿನ್ನೆಲೆ, ನಗರದ ನಾರಯಣಪುರ ಬಡಾವಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ಭಕ್ತಾಧಿಗಳು 10ಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಭಿಕ್ಷಾಟನೆ ಮಾಡಿದರು. ದತ್ತಾತ್ರೇಯ ಸ್ವಾಮಿಗೆ ಅಕ್ಕಿ, ಬೆಲ್ಲ, ಮತ್ತು ಕಾಯಿ ತುಂಬಾ ಪ್ರಿಯವಾದ ಆಹಾರವಾಗಿರುವುದರಿಂದ ಮನೆ ಮನೆಗೆ ತೆರಳಿ ಭಿಕ್ಷೆಯನ್ನು ಬೇಡುವ ಮೂಲಕ ಪಡಿಯನ್ನು ಸಂಗ್ರಹಿಸಿದರು.