ಚಿಕ್ಕಮಗಳೂರು ಜಿಲ್ಲೆಯಾದ್ಯಂತ 130 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿ ಪ್ರಗತಿ: ಸಿ. ಟಿ. ರವಿ - Hulikere road development
ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 130 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರು:ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆ ಅಡಿಯಲ್ಲಿ ರೂ. 130 ಕೋಟಿಗೂ ಹೆಚ್ಚು ಅನುದಾನದಲ್ಲಿ ವಿವಿಧ ಕಾಮಗಾರಿಗಳು ಜಿಲ್ಲೆಯಲ್ಲಿ ಹಂತ-ಹಂತವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ತಿಳಿಸಿದರು.
ಜನರ ಬಹು ದಿನಗಳ ಬೇಡಿಕೆಯಂತೆ ಕಡೂರು ತಾಲೂಕಿನ ಹುಲಿಕೆರೆ ಗ್ರಾಮದಿಂದ ಸ್ವಾಮಿಕಟ್ಟೆ ಹಾಗೂ ಕರಡಿಗವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಪ್ರವಾಸೋದ್ಯಮ ಇಲಾಖೆಯ ರೂ. 2 ಕೋಟಿ ಅನುದಾನದಲ್ಲಿ ಕಾಮಗಾರಿಗಿಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಅಲ್ಲದೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 130 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಯೋಜನೆ ಅಡಿ ವಿವಿಧ ಕೆಲಸಗಳನ್ನು ಕೈಗೊಳ್ಳಲಾಗಿದೆ. ಕೆಲವೊಂದು ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಮತ್ತೆ ಕೆಲವು ಹಂತ-ಹಂತವಾಗಿ ಆರಂಭವಾಗುತ್ತಿವೆ ಎಂದು ತಿಳಿಸಿದರು.
ಕೋವಿಡ್-19 ನಿಂದಾಗಿ ಕೆಲವೊಂದು ರಸ್ತೆ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ. ಕಡೂರು ಹಾಗೂ ಚಿಕ್ಕಮಗಳೂರು ರಸ್ತೆ ನಿರ್ಮಾಣದ ಕಾಮಗಾರಿ ಕೆಲಸ ವೇಗ ಗತಿಯಲ್ಲಿ ಸಾಗುತ್ತಿದ್ದು, ಹುಲಿಕೆರೆ, ಹೊಸಹಳ್ಳಿ, ಬಾಣೂರು ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ. ಹಾಗೂ ಗುಬ್ಬಿಹಳ್ಳಿ ಮತ್ತು ಬ್ರಹ್ಮಸಮುದ್ರ ರಸ್ತೆಗೆ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.
ಸಖರಾಯಪಟ್ಟಣ ಹಾಗೂ ಟಿ.ಬಿ. ಕಾವಲು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯರುಈ ವೇಳೆ ಒತ್ತಾಯಿಸಿದರು. ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಹಂತ-ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಸಖರಾಯಪಟ್ಟಣದಲ್ಲಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದರು.