ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಸಿ ಟಿ ರವಿ

ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಉತ್ತಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು..

By

Published : Apr 27, 2021, 2:00 PM IST

CT Ravi
ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಸಿ.ಟಿ.ರವಿ

ಚಿಕ್ಕಮಗಳೂರು :ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕೋವಿಡ್​ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿದ್ದಾರೆ.

ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಸಿ.ಟಿ.ರವಿ

ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ ಸಿ ಟಿ ರವಿ, ಸೋಂಕಿತರ ಯೋಗಕ್ಷೇಮ, ವೈದ್ಯರ ಸ್ಪಂದನೆ, ಊಟೋಪಚಾರದ ಬಗ್ಗೆ ವಿಚಾರಿಸಿದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ವಿಭಾಗದಲ್ಲಿನ ಸ್ವಚ್ಛತೆಯ ಬಗ್ಗೆ ಪರಿಶೀಲಿಸಿದರು.

ಬಳಿಕ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಉತ್ತಮ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.

ಓದಿ: ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿಯ 'ಸಂಸ್ಕೃತಿ': ಹೆಚ್​ಡಿಕೆ ಕಿಡಿ

For All Latest Updates

TAGGED:

ABOUT THE AUTHOR

...view details