ಕರ್ನಾಟಕ

karnataka

By

Published : Nov 14, 2020, 5:20 PM IST

ETV Bharat / state

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಿ.ಟಿ.ರವಿ

500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಸಂಭ್ರಮ ನೆಲೆಸಿದೆ. ಯೋಗಿ ಆದಿತ್ಯಾನಾಥ್ ನೇತೃತ್ವದ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದ್ದು, ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದೊಂದು ಶುಭ ಸಂಕೇತ. ಆಯೋಧ್ಯೆಯಲ್ಲಿ ಮತ್ತೆ ವೈಭವ ಮರುಕಳಿಸಲಿದೆ ಎಂದು ಸಿ.ಟಿ.ರವಿ ಹೇಳಿದರು.

ct ravi talk about Possibility of Cabinet expansion issue
ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ ಇದೆ: ಸಿಟಿ ರವಿ

ಚಿಕ್ಕಮಗಳೂರು:ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ: ಸಿ.ಟಿ.ರವಿ

ವರಿಷ್ಠರು ಬಿಹಾರದ ವಿದ್ಯಮಾನಗಳಲ್ಲಿ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಮನಸ್ಸಿನಲ್ಲಿ ಸಂಪುಟ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆ ಅಥವಾ ವಿಸ್ತರಣೆ ಎಂಬುದರ ಬಗ್ಗೆ ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಜೊತೆಗೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರುತ್ತಾರೆ ಎಂದು ಹೇಳಿದರು.

ಬಿಹಾರದಲ್ಲಿ ನಾಲ್ಕನೇ ಬಾರಿಗೆ ನಿತಿಶ್ ಕುಮಾರ್ ಸರ್ಕಾರ ಜನಮನ್ನಣೆ ಗಳಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಅವರು ಅದನ್ನ ಸಾಧಿಸಿದ್ದಾರೆ. ಪ್ರಧಾನಿ ಹಾಗೂ ನಿತಿಶ್ ಕುಮಾರ್ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರ ಬಂದಿದೆ. ಬಿಹಾರ ಜನರ ಕನಸನ್ನು ನನಸು ಮಾಡಲು ಶಕ್ತಿ ತುಂಬುವಂತಹ ಕೆಲಸವನ್ನು ಎನ್​​ಡಿಎ ಮಾಡುತ್ತೆ. ಮೂರು ರಾಜ್ಯಗಳ ಉಸ್ತುವಾರಿ ಕುರಿತಂತೆ ಪಕ್ಷ ಕೊಡುವ ಜವಾಬ್ದಾರಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ ಎಂದರು.

500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಸಂಭ್ರಮ ನೆಲೆಸಿದೆ. ಯೋಗಿ ಆದಿತ್ಯಾನಾಥ್ ನೇತೃತ್ವದ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದ್ದು, ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದೊಂದು ಶುಭ ಸಂಕೇತ, ಆಯೋಧ್ಯೆಯಲ್ಲಿ ಮತ್ತೆ ವೈಭವ ಮರುಕಳಿಸಲಿದೆ ಎಂದು ಸಿ.ಟಿ.ರವಿ ಹೇಳಿದರು.

ABOUT THE AUTHOR

...view details