ಕರ್ನಾಟಕ

karnataka

ETV Bharat / state

ದತ್ತಮಾಲಾ ಅಭಿಯಾನ.. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್​​.. - ದತ್ತಮಾಲಾ ಅಭಿಯಾನ

ಇಂದು ಅಭಿಯಾನದ ಕೊನೆಯ ದಿನವಾಗಿದೆ. ದತ್ತ ಮಾಲಾ ಅಭಿಯಾನ ಅಂಗವಾಗಿ ಸೂಕ್ಷ್ಮ ಗಡಿ ಪ್ರದೇಶವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಬಿಗಿ ಕಟ್ಟೆಚ್ಚರ ವಹಿಸಿದ್ದಾರೆ..

ಚಿಕ್ಕಮಗಳೂರು ಜಿಲ್ಲಾದ್ಯಂತ ಭಿಗಿ ಪೊಲೀಸ್​ ಬಂದೋಬಸ್ತ್​​
ಚಿಕ್ಕಮಗಳೂರು ಜಿಲ್ಲಾದ್ಯಂತ ಭಿಗಿ ಪೊಲೀಸ್​ ಬಂದೋಬಸ್ತ್​​

By

Published : Nov 14, 2021, 4:46 PM IST

ಚಿಕ್ಕಮಗಳೂರು :ಜಿಲ್ಲೆಯಲ್ಲಿ ಶ್ರೀರಾಮಸೇನೆ ಸಂಘಟನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಹಾಗೂ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಜಿಲ್ಲೆಯಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್..​​

ಇಂದು ಅಭಿಯಾನದ ಕೊನೆಯ ದಿನವಾಗಿದೆ. ದತ್ತ ಮಾಲಾ ಅಭಿಯಾನ ಅಂಗವಾಗಿ ಸೂಕ್ಷ್ಮ ಗಡಿ ಪ್ರದೇಶವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಬಿಗಿ ಕಟ್ಟೆಚ್ಚರ ವಹಿಸಿದ್ದಾರೆ.

ಶ್ರೀರಾಮಸೇನೆ ವತಿಯಿಂದ ದತ್ತಪೀಠದದಲ್ಲಿ ನಡೆಯುತ್ತಿರುವ ದತ್ತ ಮಾಲಾ ಅಭಿಯಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಮಾಲಾಧಾರಿಗಳು ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಬರುವ ಎಲ್ಲಾ ವಾಹನಗಳಿಗೆ ತಪಾಸಣೆ ಮಾಡಿ ಬಿಡಲಾಗುತ್ತಿದೆ. ಜಿಲ್ಲೆಯಾದ್ಯಂತ ಪ್ರತಿ ಚೆಕ್​​ಪೋಸ್ಟ್ ಹಾಗೂ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿಯನ್ನು ಅಳವಡಿಸಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ABOUT THE AUTHOR

...view details