ಕರ್ನಾಟಕ

karnataka

ETV Bharat / state

ಮಾಲೆ ಧಾರಣೆ ಮಾಡಿ ದತ್ತ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿ ಟಿ ರವಿ

ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ ಟಿ ರವಿ ಸೇರಿದಂತೆ ನಗರದ 100ಕ್ಕೂ ಹೆಚ್ಚು ಭಕ್ತರು ಇಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ದತ್ತ ಜಯಂತಿ ಹಿನ್ನೆಲೆಯಲ್ಲಿ ಮಾಲೆ ಧಾರಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

Datta Jayanti program starts from today  from CT Ravi
ದತ್ತ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಟಿ ರವಿ

By

Published : Nov 28, 2022, 3:43 PM IST

ಚಿಕ್ಕಮಗಳೂರು:ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಜಿಲ್ಲೆಯಲ್ಲಿ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮಾಲೆ ಧಾರಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ.ಟಿ.ರವಿ ಸೇರಿದಂತೆ ನಗರದ 100 ಕ್ಕೂ ಹೆಚ್ಚು ಭಕ್ತರು ಇಂದು ಮಾಲೆ ಧಾರಣೆ ಮಾಡಿದ್ದಾರೆ. ಮುಂದಿನ ತಿಂಗಳ 6 ರಂದು ಅನುಸೂಯ ಜಯಂತಿ ಹಾಗೂ 7 ರಂದು ಜಿಲ್ಲಾ ಕೇಂದ್ರದಲ್ಲಿ ಶೋಭ ಯಾತ್ರೆ, 8 ರಂದು ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ ಮತ್ತು ಮಾಲಾ ವಿಸರ್ಜನೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ದತ್ತ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಡಿ. 6 ಬೆಳಗ್ಗೆ 6 ರಿಂದ ಡಿ.9 ರ ಬೆಳಗ್ಗೆ 10 ಗಂಟೆಯವರೆಗೆ ಮುಳ್ಳಯ್ಯನಗಿರಿ ಬಾಬಾ ಬುಡನ್ ಗಿರಿ ಶ್ರೇಣಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ:2017ರಲ್ಲಿ ಆಡಳಿತ ನಡೆಸಿದ್ದು ಕಾಂಗ್ರೆಸ್, ಬಿಜೆಪಿಯಲ್ಲ: ಸಿ ಟಿ ರವಿ

ABOUT THE AUTHOR

...view details