ಚಿಕ್ಕಮಗಳೂರು:ಶ್ರೀರಾಮ ಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ, ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ ನವೆಂಬರ್ 4 ರ ಬೆಳಗ್ಗೆ 6 ರಿಂದ ನವೆಂಬರ್ 6ರ ಬೆಳಿಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನ ಹಳ್ಳ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ಇರುವುದಿಲ್ಲ.
ನವೆಂಬರ್ ಮೊದಲ ವಾರಂತ್ಯ ಮುಳ್ಳಯ್ಯನಗಿರಿ ಭಾಗಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಹೀಗಾಗಿ, ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಡಿಸಿ ಹಾಗು ಎಸ್ಪಿ ಈ ಆದೇಶ ಮಾಡಿದ್ದಾರೆ. ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸುವರು.