ಕರ್ನಾಟಕ

karnataka

ETV Bharat / state

ದತ್ತಪೀಠ: ಸರ್ಕಾರ ನೇಮಿಸಿದ ಸಮಿತಿಗೆ ಅಪಸ್ವರ - ಚಿಕ್ಕಮಗಳೂರಿನ ದತ್ತಪೀಠ

ಹಿಂದೂ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ದತ್ತಪೀಠದ ಆಡಳಿತಾತ್ಮಕ ನಿರ್ವಹಣೆಗೆ ಸರ್ಕಾರ ರಚಿಸಿತ್ತು.

objection-to-committee-appointed-govt-to-dattapeet
ದತ್ತಪೀಠಕ್ಕೆ ಸರ್ಕಾರ ನೇಮಿಸಿದ ಸಮಿತಿಗೆ ಅಪಸ್ವರ

By

Published : Nov 20, 2022, 8:36 AM IST

Updated : Nov 20, 2022, 10:37 AM IST

ಚಿಕ್ಕಮಗಳೂರು:ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ತಾಲೂಕಿನ ದತ್ತಪೀಠದ ಆಡಳಿತಕ್ಕೆ ರಾಜ್ಯ ಸರ್ಕಾರ ನೇಮಿಸಿದ ವ್ಯವಸ್ಥಾಪನಾ ಸಮಿತಿಯ ವಿರುದ್ಧ ಅಪಸ್ವರ ಕೇಳಿ ಬಂದಿದೆ. ಸಮಿತಿಯಲ್ಲಿ ಎರಡು ಸಮುದಾಯಕ್ಕೆ ಸೇರಿದ ಎಂಟು ಜನ ಇರಬೇಕಿತ್ತು. ಆದರೆ, ಒಂದೇ ಸಮುದಾಯಕ್ಕೆ ಸೇರಿದ 7 ಜನರಿದ್ದಾರೆ. ಈ ಸಮಿತಿಯ ಮೇಲೆ ನಂಬಿಕೆ ಇಲ್ಲ. ಕೂಡಲೇ ಸಮಿತಿಯನ್ನು ಅನೂರ್ಜಿತಗೊಳಿಸಬೇಕು ಎಂದು ಇಲ್ಲಿನ ಕೋಮು ಸೌಹಾರ್ದ ವೇದಿಕೆ ಆಗ್ರಹಿಸಿದೆ.

ನಗರದಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್, ಸಮಿತಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಕಮಿಟಿಯನ್ನು ಕೂಡಲೇ ರದ್ದು ಪಡಿಸಬೇಕು. ಸರ್ಕಾರ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಆಡಳಿತಾತ್ಮಕ ಅನುಕೂಲಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಎಂಟು ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿತ್ತು. ಆದರೆ, ಮುಸ್ಲಿಂ ಸಮುದಾಯದ ಕೇವಲ ಒಬ್ಬರನ್ನು ಕಮಿಟಿ ಸದಸ್ಯರನ್ನಾಗಿ ನೇಮಿಸಿ, ಉಳಿದ 7 ಜನರು ಒಂದೇ ಸಮುದಾಯಕ್ಕೆ ಸೇರಿದವರನ್ನು ನೇಮಿಸಿದೆ. ಈ ಮೂಲಕ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್

ಹೀಗಾಗಿ, ಹಾಲಿ ಕಮಿಟಿಯನ್ನು ಅನೂರ್ಜಿತಗೊಳಿಸಬೇಕು. ಸಮಾನ ರೀತಿಯಲ್ಲಿ ಎರಡೂ ಸಮುದಾಯಕ್ಕೆ ಸೇರಿದ ಸದಸ್ಯರನ್ನು ಹಾಗೂ ಇಬ್ಬರು ಮಹಿಳೆಯರನ್ನೊಳಗೊಂಡ ಪಾರದರ್ಶಕ ಸಮಿತಿ ರಚಿಸಬೇಕು. ಈ ಕಮಿಟಿ 1989 ರ ಧಾರ್ಮಿಕ ದತ್ತಿ ಆಯುಕ್ತರ ಆದೇಶಕ್ಕೆ ಪೂರಕವಾಗಿರಬೇಕು. ಇಲ್ಲವಾದಲ್ಲಿ ವೇದಿಕೆ ವತಿಯಿಂದ ಜನಪರ ಮತ್ತು ಕಾನೂನು ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಶಾಸಕ ಸಿಟಿ ರವಿ, ಸಚಿವ ಸುನಿಲ್​ ಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ್ ಮುತಾಲಿಕ್​

Last Updated : Nov 20, 2022, 10:37 AM IST

ABOUT THE AUTHOR

...view details