ಕರ್ನಾಟಕ

karnataka

ETV Bharat / state

ತರೀಕೆರೆ : ವೈದ್ಯನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿ - ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ದಾಳಿ

ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಅಗ್ನಿಶಾಮಕ ಠಾಣೆ ಬಳಿ ನಡೆದಿದೆ. ರಸ್ತೆಯ ಪಕ್ಕ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ವೈದ್ಯರನ್ನು ಸ್ಥಳೀಯರು ಶಿವಮೊಗ್ಗ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ.

ವೈದ್ಯನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿ
ವೈದ್ಯನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿ

By

Published : May 31, 2021, 8:05 PM IST

ಚಿಕ್ಕಮಗಳೂರು:ಮಾರಕಾಸ್ತ್ರಗಳಿಂದ ಖಾಸಗಿ ಆಸ್ಪತ್ರೆಯವೈದ್ಯರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಅಗ್ನಿಶಾಮಕ ಠಾಣೆ ಬಳಿ ನಡೆದಿದೆ.

ಕರ್ತವ್ಯ ಮುಗಿಸಿ ಸೈಕಲ್​​ನಲ್ಲಿ ಮನೆಯತ್ತ ವೈದ್ಯ ದೀಪಕ್ ಎಂಬುವರು ಹೊರಟಿದ್ದರು. ಈ ವೇಳೆ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ರಸ್ತೆಯ ಪಕ್ಕ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ವೈದ್ಯರನ್ನು ಸ್ಥಳೀಯರು ಶಿವಮೊಗ್ಗ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ABOUT THE AUTHOR

...view details