ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರದ ಕೂಗು ಹೆಚ್ಚಾಗುತ್ತಲೇ ಇದೆ. ಈಗಾಗಲೇ ಹತ್ತಾರು ಹಳ್ಳಿಗಳಲ್ಲಿ ನಾನಾ ಕಾರಣಗಳನ್ನು ನೀಡಿ ಮತದಾನ ಬಹಿಷ್ಕರಿಸಲು ಜನ ಮುಂದಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮತದಾನ ಬಹಿಷ್ಕಾರದ ಎಚ್ಚರಿಕೆ ...ಕಾರಣ? - undefined
ಚಿಕ್ಕಮಗಳೂರು ಜಿಲ್ಲೆಯ ಹತ್ತಾರೂ ಗ್ರಾಮಗಳಲ್ಲಿ ನಾನಾ ಕಾರಣಗಳನ್ನು ನೀಡಿ ಮತದಾನ ಬಹಿಷ್ಕಾರದ ಎಚ್ಚರಿಕೆ- ಜಮೀನನ್ನ ಅರಣ್ಯ ಇಲಾಖೆ ಒತ್ತುವರಿ ಮಾಡಿದೆ ಎಂಬ ಆರೋಪ- ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮಸ್ಥರಿಂದಲೂ ವೋಟಿಂಗ್ ಬಹಿಷ್ಕಾರಕ್ಕೆ ನಿರ್ಧಾರ

ಚಿಕ್ಕಮಗಳೂರು
ಚಿಕ್ಕಮಗಳೂರು
ಮೂಡಿಗೆರೆ ತಾಲೂಕಿನಲ್ಲಿ ಚುನಾವಣೆಯ ಬಹಿಷ್ಕಾರದ ಕೂಗು ಕೇಳಿ ಬರುತ್ತಿದೆ. ಜಮೀನನ್ನ ಅರಣ್ಯ ಇಲಾಖೆ ಒತ್ತುವರಿ ಮಾಡಿಕೊಂಡಿದೆ ಎಂದು ಆರೋಪಿಸಿ ಬೆಳಗೋಡು ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಅನೇಕ ವರ್ಷಗಳಿಂದ ಇಲ್ಲಿನ ಜನರು ಕೃಷಿ ನಡೆಸುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆಯವರು ಒತ್ತುವರಿ ಮಾಡಿದ್ದಾರೆ. ಅಲ್ಲದೆ, ಜಮೀನಿಗೆ ಸ್ಥಳೀಯರು ಪ್ರವೇಶಿಸದಂತೆ ಆ ಜಾಗದಲ್ಲಿ ಆನೆಹೊಂಡ, ಸೋಲಾರ್ ಬೇಲಿ ನಿರ್ಮಿಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಅಲ್ಲದೆ, ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.