ಚಿಕ್ಕಮಗಳೂರು:ಜಿಲ್ಲೆಯ ತರೀಕೆರೆ ತಾಲೂಕಿನ ತಾಲೂಕು ಪಂಚಾಯತ್ ಹಾಗೂ ಪುರಸಭೆ ಕಟ್ಟಡಗಳ ಗೋಡೆಗಳಿಗೆ ಹೊಂದಿಕೊಂಡತೆ ಇದ್ದ ಅನಧಿಕೃತ ಗೂಡಂಗಡಿಗಳನ್ನು ಇಂದು ಪುರಸಭೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಪೊಲೀಸರ ಸಹಯೋಗದಲ್ಲಿ ತೆರವು ಮಾಡುವ ಕಾರ್ಯಾಚರಣೆ ನಡೆಸಿದರು. ಪರಿಣಾಮ 30ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ.
ಅನಧಿಕೃತ ಗೂಡಂಗಡಿಗಳ ತೆರವು... ಬೀದಿಗೆ ಬಿದ್ದ 30ಕ್ಕೂ ಹೆಚ್ಚು ಬಡ ಕುಟುಂಬಗಳು - tarikere chickmagaluru latest news
ತರೀಕೆರೆ ತಾಲೂಕಿನ ತಾಲೂಕು ಪಂಚಾಯತ್ ಹಾಗೂ ಪುರಸಭೆ ಕಟ್ಟಡಗಳ ಗೋಡೆಗಳಿಗೆ ಹೊಂದಿಕೊಂಡತೆ ಇದ್ದ ಅನಧಿಕೃತ ಗೂಡಂಗಡಿಗಳನ್ನು ಇಂದು ಪುರಸಭೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಪೊಲೀಸರ ಸಹಯೋಗದಲ್ಲಿ ತೆರವು ಮಾಡುವ ಕಾರ್ಯಾಚರಣೆ ನಡೆಸಿದರು. ಪರಿಣಾಮ 30ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ.
ತಾಲೂಕು ಆಸ್ವತ್ರೆ ಹಾಗೂ ಸುತ್ತಮುತ್ತಲಿನ ಪುರಸಭೆಯ ಜಾಗದಲ್ಲಿ ಹಲವಾರು ವರ್ಷಗಳಿಂದ 30ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿ ಸಣ್ಣ ಸಣ್ಣ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದವು. ಆದ್ರೆ ತಾಲೂಕು ಪಂಚಾಯತ್ ಹಾಗೂ ಪುರಸಭೆಗೆ ಬರುವಂತಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಹಿನ್ನೆಲೆ ಅಧಿಕಾರಿಗಳು ಇಲ್ಲಿ ದಾಳಿ ಮಾಡಿ ಅಂಗಡಿಗಳನ್ನು ತೆರವು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ.
ಈ ವೇಳೆ ತಾಲೂಕು ಆಸ್ಪತ್ರೆಯ ಮುಂಭಾಗದಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಮಹಿಳೆ ಹಿಟಾಚಿಗೆ ಅಡ್ಡ ನಿಂತು ಯಾವುದೇ ಕಾರಣಕ್ಕೂ ತೆರವು ಮಾಡಲು ಬಿಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ರು. ಆಗ ಅಧಿಕಾರಿಗಳು ಆಕೆಯನ್ನು ಸಮಾಧಾನ ಮಾಡಿ ತಮ್ಮ ಕೆಲಸ ಮುಂದುವರೆಸಿದ್ದಾರೆ. ಪರಿಣಾಮ 30ಕ್ಕೂ ಹೆಚ್ಚು ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ.