ಚಿಕ್ಕಮಗಳೂರು:ಮೂಡಿಗೆರೆ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಪಡಿತರ ವಿತರಣೆಯಲ್ಲಿ ತೊಂದರೆ ಆಗುತ್ತಿದೆ ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕ್ಷೇತ್ರದ ಅನೇಕ ಭಾಗಗಳಲ್ಲಿ ಸರಿಯಾದ ರೀತಿಯಲ್ಲಿ ಪಡಿತರ ವಿತರಣೆಯಾಗುತ್ತಿಲ್ಲ. ನಾನೇ ಖುದ್ದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಸಮಸ್ಯೆಯನ್ನು ನೋಡಿದ್ದೇನೆ. ಈ ವೇಳೆ ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಪಡಿತರ ವಿತರಿಸುವಂತೆ ಸೂಚಿಸಿದ್ದೇನೆ. ಕಂಪ್ಯೂಟರ್ ಹಾಗೂ ಸರ್ವರ್ ಸಮಸ್ಯೆಯಿಂದ ವಿಳಂಬವಾಗುತ್ತಿದೆ ಎಂದು ಅವರು ಹೇಳಿದ್ದಾರೆ.