ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದರು.

district-collector-dr-bagadi-gautam-visit-to-rainfall-area
ಚಿಕ್ಕಮಗಳೂರು: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

By

Published : Jan 11, 2021, 5:16 PM IST

ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ತೋಟಗಾರಿಕಾ ಬೆಳೆಗಳು ಸಂಪೂರ್ಣ ಹಾಳಾಗಿವೆ. ಈ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದರು.

ಚಿಕ್ಕಮಗಳೂರು: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಅತ್ತಿಗೆರೆ, ಫಲ್ಗುಣಿ, ಬೆಟ್ಟಗೆರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ಧಾರಾಕಾರ ಮಳೆಯಿಂದಾಗಿ ಹಾನಿಗೀಡಾಗಿರುವ ಭತ್ತ, ಕಾಫಿ ಸೇರಿದಂತೆ ತೋಟಗಾರಿಕಾ ಬೆಳೆಗಳನ್ನು ಖುದ್ದು ಪರಿಶೀಲಿಸಿದರು. ಈ ವೇಳೆ ರೈತರು ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು,.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಕಾಫಿ ಬೋರ್ಡ್​ನಿಂದ ಈಗಾಗಲೇ 5 ತಂಡಗಳನ್ನು ರಚನೆ ಮಾಡಿ ಸರ್ವೇ ಮಾಡಲು ಸೂಚನೆ ನೀಡಲಾಗಿದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಕೂಡಲೇ ಸರ್ವೇ ಮಾಡಿ ಮಾಹಿತಿ ನೀಡುತ್ತಾರೆ. ಅದರ ಮಾಹಿತಿ ಆಧಾರದ ಮೇಲೆ ಸರ್ಕಾರಕ್ಕೆ ವರದಿ ಸಲ್ಲಿಸಿ, ಶೀಘ್ರವೇ ರೈತರಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ABOUT THE AUTHOR

...view details