ಚಿಕ್ಕಮಗಳೂರು:ಜಿಲ್ಲಾ ಉತ್ಸವದ ಅಂಗವಾಗಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ವಸ್ತು ಪ್ರದರ್ಶನವನ್ನು ಆಯೋಜನೆ ಮಾಡಿದ್ದು, ಸರ್ಕಾರದ ವಿವಿಧ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಉತ್ಸವ: ಜಿಲ್ಲಾಡಳಿತದಿಂದ ವಸ್ತು ಪ್ರದರ್ಶನ - ವಿವಿಧ ಇಲಾಖೆಯ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ
ಜಿಲ್ಲಾ ಉತ್ಸವದ ಅಂಗವಾಗಿ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ವಸ್ತು ಪ್ರದರ್ಶನವನ್ನು ಆಯೋಜನೆ ಮಾಡಿದ್ದು, ಸರ್ಕಾರದ ವಿವಿಧ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
![ಚಿಕ್ಕಮಗಳೂರು ಜಿಲ್ಲಾ ಉತ್ಸವ: ಜಿಲ್ಲಾಡಳಿತದಿಂದ ವಸ್ತು ಪ್ರದರ್ಶನ kn_ckm_01_Vastu_pradarshana_av_7202347](https://etvbharatimages.akamaized.net/etvbharat/prod-images/768-512-6246745-thumbnail-3x2-mn.jpg)
ಕಾಫಿನಾಡಿನಲ್ಲಿ ಜಿಲ್ಲಾ ಉತ್ಸವ, ಜಿಲ್ಲಾಡಳಿತದಿಂದ ವಸ್ತುಪ್ರದರ್ಶನ ಆಯೋಜನೆ...!
ಕಾಫಿನಾಡಿನಲ್ಲಿ ಜಿಲ್ಲಾ ಉತ್ಸವ: ಜಿಲ್ಲಾಡಳಿತದಿಂದ ವಸ್ತು ಪ್ರದರ್ಶನ ಆಯೋಜನೆ
ಪ್ರಮುಖವಾಗಿ ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತು ಪ್ರದರ್ಶನಕ್ಕೆ ಸಾರ್ವಜನಿಕರನ್ನು ಆಕರ್ಷಿಸಲು ವಿವಿಧ ಬಗೆಯ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಕಲಾ ಮಾದರಿಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿವಿಧ ಮಹಿಳಾ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಮಹಿಳೆಯರು ತಯಾರಿಸಿದ ತಿನಿಸುಗಳು, ಕೈಯಲ್ಲಿ ಹೆಣೆದಿರುವ ಸ್ವೆಟರ್, ಕ್ರಿಯಾತ್ಮಕವಾಗಿ ತಯಾರಿಸಿದ ಗೃಹೋಪಯೋಗಿ ವಸ್ತುಗಳ ಪ್ರದರ್ಶನವನ್ನು ಸಹ ಇಲ್ಲಿ ಆಯೋಜನೆ ಮಾಡಲಾಗಿದೆ.