ಕರ್ನಾಟಕ

karnataka

ಕರ್ತವ್ಯಲೋಪ ಹಿನ್ನೆಲೆ ಜಿಲ್ಲಾ ಆರೋಗ್ಯ ಅಧಿಕಾರಿ ಅಮಾನತು

ಕರ್ತವ್ಯಲೋಪ ಹಿನ್ನೆಲೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪ್ರಭು ಅವರನ್ನು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

By

Published : Mar 3, 2020, 9:41 PM IST

Published : Mar 3, 2020, 9:41 PM IST

District Health Officer Dr. Prabhu
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪ್ರಭು

ಚಿಕ್ಕಮಗಳೂರು: ಕರ್ತವ್ಯಲೋಪ ಹಿನ್ನೆಲೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪ್ರಭು ಅವರನ್ನು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಆರೋಗ್ಯ ಅಧಿಕಾರಿ ಅಮಾನತು

ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸರ್ಕಾರದ ಆದೇಶ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸದ ಕಾರಣ ಸರ್ಕಾರದ ಆದೇಶ ಉಲ್ಲಂಘಿಸಿ ಕರ್ತವ್ಯಲೋಪ ಎಸಗಿರುವ ಬಗ್ಗೆ ಸಾರ್ವಜನಿಕರಿಂದ ಡಾ. ಪ್ರಭು ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆ ಕಡತಗಳು ಮತ್ತು ದಾಖಲಾತಿಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿತ್ತು.

ಜಿಲ್ಲಾ ಆರೋಗ್ಯ ಅಧಿಕಾರಿ ಅಮಾನತು

ತನಿಖೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಮಾರ್ಗಸೂಚಿ ಅನುಗುಣವಾಗಿ ಕ್ರಮ ವಹಿಸದೆ ಇರುವುದು ಕಂಡು ಬಂದಿದೆ. ಈ ಹಿನ್ನೆಲೆ ಮೇಲಾಧಿಕಾರಿಗಳ ಸೂಚನೆಯಂತೆ ಕ್ರಮ ವಹಿಸದೆ ಹಾಗೂ ದೈನಂದಿನ ಕಾರ್ಯನಿರ್ವಹಣೆ ಮತ್ತು ಕಡತ ಮಂಡನೆಯಲ್ಲಿ ಸ್ವತಃ ಲಿಖಿತವಾಗಿ ಅಭಿಪ್ರಾಯ ಸೂಚಿಸದೆ ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯ ತೋರಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಡಾ. ಪ್ರಭುರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details