ಚಿಕ್ಕಮಗಳೂರು:ಕೋವಿಡ್-19 ವೈರಸ್ ಅನ್ನು ರಾಜ್ಯದಲ್ಲಿ ತಡೆಗಟ್ಟಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ದೇಣಿಗೆ ನೀಡಲಾಯಿತು.
ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ - ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ
ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ವೈರಸ್ ತಡೆಗಟ್ಟುವ ಸಲುವಾಗಿ ರಾಜ್ಯ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರ ಉಲ್ಲೇಖಗಳ ಅನ್ವಯ ಸಹಕಾರಿ ಕ್ಷೇತ್ರವನ್ನು ಉದ್ದೇಶಿಸಿ ಮಾಡಿದ ಮನವಿಗೆ ಅವರು ಸ್ಪಂದಿಸಿದ್ದು ದೇಣಿಗೆ ನೀಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ವೈರಸ್ ತಡೆಗಟ್ಟುವ ಸಲುವಾಗಿ ರಾಜ್ಯ ಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರ ಉಲ್ಲೇಖಗಳನ್ವಯ ಸಹಕಾರಿ ಕ್ಷೇತ್ರವನ್ನು ಉದ್ದೇಶಿಸಿ ಮಾಡಿದ ಮನವಿಗೆ ಅವರು ಸ್ಪಂದಿಸಿದ್ದು ದೇಣಿಗೆ ನೀಡಿದ್ದಾರೆ.
ಈ ವಿಷಮ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ 25 ಲಕ್ಷ ರೂ. ಹಾಗೂ ಜಿಲ್ಲೆಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ 7.18.501 ಲಕ್ಷ.ರೂ, ಸೇರಿದಂತೆ ಒಟ್ಟು 32,18,501 ಲಕ್ಷ ರೂ.ಗಳನ್ನು ಉಪ ಸಭಾಪತಿ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಎಲ್ ಎಲ್ ಧರ್ಮೇಗೌಡ, ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿ ಮಾಡಿ ಈ ಪರಿಹಾರದ ದೇಣಿಗೆ ಹಣವನ್ನು ಡಿಡಿ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.