ಚಿಕ್ಕಮಗಳೂರು:ಜಿಲ್ಲೆಯಲ್ಲಿರುವ ಮುಳ್ಳಯ್ಯನಗಿರಿ ಹಾಗೂ ಆಸುಪಾಸಿನ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದ್ದು, ಮೂರು ದಿನಗಳ ಕಾಲ ಸಂಚಾರ ನಿಷೇಧಿಸಿದೆ.
ಮುಳ್ಳಯ್ಯನ ಗಿರಿ ಹಾಗೂ ಆಸುಪಾಸಿನ ಪ್ರವಾಸಿ ತಾಣಗಳಿಗೆ ವಾಹನಗಳು ಹಾಗೂ ಪ್ರವಾಸಿಗರು ಬರುವುದನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ನಿಷೇಧ ಮಾಡಿದ್ದು, ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರ ಭಾಗದಲ್ಲಿಯೂ ಸಂಚಾರ ನಿಷೇಧ ಮಾಡಲಾಗಿದೆ.