ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು - Balehole in Mudigere
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಬಾಳೆಹೊಳೆ ಎಂಬಲ್ಲಿ ಅಡಿಕೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ದುರಂತ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು
ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೆಹೊಳೆ ಎಂಬಲ್ಲಿ ಅಡಿಕೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ನರೇಶ್, ನಾಗೇಶ್ ಎಂಬ ಇಬ್ಬರು ಸ್ಥಳದಲ್ಲೇ ಮೃತಪಟ್ಟವರು. ಮೃತರು ಕೊಪ್ಪ ತಾಲೂಕಿನ ನಾಗದಾಳ್ ಹಾಗೂ ದಯಂಬಳ್ಳಿ ಗ್ರಾಮದವರಾಗಿದ್ದಾರೆ.
ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Last Updated : Jan 14, 2021, 4:06 PM IST