ಕರ್ನಾಟಕ

karnataka

By

Published : Sep 29, 2020, 2:22 PM IST

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು

ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ನಾಲ್ಕು ಗಂಟೆಗೆ ಜಾವಳಿ ಸಮೀಪದ ಮೂಲೆಮನೆ ರಸ್ತೆ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆ ಬದಿಯ ಹಳ್ಳಕ್ಕೆ ತಡೆಗೋಡೆಗಳಿಲ್ಲದೆ ಇರುವುದು ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Driver lost control of Car Accident in Chikmagalur
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು:ರಸ್ತೆ ತಿರುವಿನಲ್ಲಿ ತಡೆ ಗೋಡೆಗಳಿಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೂಲೆಮನೆ ಎಂಬ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು

ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ನಾಲ್ಕು ಗಂಟೆಗೆ ಜಾವಳಿ ಸಮೀಪದ ಮೂಲೆಮನೆ ರಸ್ತೆ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆ ಬದಿಯ ಹಳ್ಳಕ್ಕೆ ತಡೆಗೋಡೆಗಳಿಲ್ಲದೆ ಇರುವುದು ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಾರು ಹಳ್ಳಕ್ಕೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಹಿಂದೆ ಸಂಚರಿಸುತ್ತಿದ್ದ ವಾಹನಗಳು ಹಾಗೂ ಸ್ಥಳೀಯರಿಂದ ಕಾರಿನಲ್ಲಿದ್ದವರನ್ನು ರಕ್ಷಿಸಲಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ಪ್ರವಾಸಿ ವಾಹನಗಳು ಓಡಾಡುತ್ತವೆ. ಈ ತಿರುವಿನಲ್ಲಿ ವಾರಕ್ಕೊಂದು ಅಪಘಾತಗಳು ನಡೆಯುತ್ತಿವೆ.

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು

ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ಗಮನಕ್ಕೆ ತಂದರೂ ಉಪಯೋಗವಿಲ್ಲದಂತಾಗಿದೆ ಎಂದು ಸ್ಥಳೀಯರು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಈಗ ಸಣ್ಣ-ಪುಟ್ಟ ಅಪಘಾತಗಳಾಗಿವೆ. ನಾಳೆ ದೊಡ್ಡ ಅನಾಹುತವಾದರೆ ಅದಕ್ಕೆ ಜವಾಬ್ದಾರಿ ಯಾರೆಂದು ಸ್ಥಳೀಯರು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ABOUT THE AUTHOR

...view details