ಚಿಕ್ಕಮಗಳೂರು:ಚಿಕ್ಕಮಗಳೂರು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಕಿಡಿಗೇಡಿಗಳು ಸಂಚು ರೂಪಿಸಿದ್ದು, ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಿರುವ ಆರೋಪ ಕೇಳಿ ಬಂದಿದೆ.
ಕೈ ಮರ ಚೆಕ್ಪೋಸ್ಟ್ನಿಂದ ದತ್ತಪೀಠದ ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ ಎಂದು ಹೇಳಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದತ್ತ ಜಯಂತಿ ಉತ್ಸವಕ್ಕೆ ಅಡ್ಡಿ; ಕಿಡಿಗೇಡಿಗಳ ವಿರುದ್ಧ ಸಿ.ಟಿ ರವಿ ಆಕ್ರೋಶ ಈ ಬಗ್ಗೆ ಶಾಸಕ ಸಿ.ಟಿ ರವಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಿಡಿಗೇಡಿಗಳು ವಿಧ್ವಂಸಕ ಕೃತ್ಯ ನಡೆಸುವಂತಹ ಸಂಚು ಮಾಡಿರುವುದು ಆಘಾತಕಾರಿ ಸಂಗತಿ. ಅಲ್ಲದೇ ಇದು ಗಂಭೀರವಾಗಿ ಪರಿಗಣಿಸಬೇಕಾದ ವಿಷಯ. ರಸ್ತೆಯುದ್ದಕ್ಕೂ ಹಾಕಿದ್ದ ಮೊಳೆಗಳನ್ನು ಪೊಲೀಸರು ಮತ್ತು ನಮ್ಮ ಕಾರ್ಯಕರ್ತರು ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಈ ಕೃತ್ಯದ ಹಿಂದೆ ಯಾರೇ ಇರಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದರು.
ದತ್ತ ಜಯಂತಿಗೆ ಚಾಲನೆ ಸಿಕ್ಕಿದ್ದು ಮೊದಲ ದಿನವಾದ ಇಂದು ಅನುಸೂಯ ಜಯಂತಿ ನಡೆಯುತ್ತಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ: 'ಮಹಾ' ಲಾರಿಗಳಿಗೆ ಕಲ್ಲು, ಹಲವರು ಪೊಲೀಸ್ ವಶಕ್ಕೆ