ಚಿಕ್ಕಮಗಳೂರು:ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುದಿನವೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಕೆಲ್ಲೂರು ಗ್ರಾಮದಲ್ಲಿರುವ ತಮ್ಮ ನಿವಾಸಕ್ಕೆ ಶಾಸಕರು ಎಲ್ಲ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಆಹ್ವಾನಿಸಿದ್ದರು.
ಆದರೆ, ನೀತಿ ಸಂಹಿತೆ ಜಾರಿಯಾಗಿದ್ದರೂ ಅನೇಕ ಜನರು ಶಾಸಕರ ನಿವಾಸದಲ್ಲಿ ಸೇರಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚುನಾವಣಾ ಆಯೋಗದ ತಂಡ ಭೇಟಿ ನೀಡಿ ಪರಿಶೀಲಿಸಿದರು. ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಮೂಡಿಗೆರೆ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Explained: ಚುನಾವಣಾ ನೀತಿ ಸಂಹಿತೆ ಎಂದರೇನು? ತಿಳಿಯಬೇಕಾದ 10 ನಿಯಮಗಳು