ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹತ್ತಿ ಉರಿದ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ... ಸುಟ್ಟು ಕರಕಲಾದ ಮನೆ - ಪ್ರಕರಣ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಮನೆಗೆ ಬೆಂಕಿ ಹತ್ತಿದ ಘಟನೆ ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದ್ದು, ಮನೆ ಸಂಪೂರ್ಣ ಸುಟ್ಟು ಹೋಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ
ಈ ಅವಘಡದಿಂದ ಜೇನುಗದ್ದೆ ಗ್ರಾಮದ ವಿಕ್ರಮ್ ಅವರ ಮನೆ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳ ಬೆಂಕಿಗಾಹುತಿಯಾಗಿವೆ ಎನ್ನಲಾಗುತ್ತಿದೆ.
ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.