ಚಿಕ್ಕಮಗಳೂರು: ಕಾರಿನಲ್ಲಿ ಚಲಿಸುತ್ತಿದ್ದವರ ಮೇಲೆ ಆನೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಲಿಸುತ್ತಿದ್ದ ಕಾರಿನ ಮೇಲೆ ಆನೆ ದಾಳಿ: ಇಬ್ಬರ ಸ್ಥಿತಿ ಗಂಭೀರ - Death by elephant attack
ಸಂಚರಿಸುತ್ತಿದ್ದ ಕಾರಿನ ಮೇಲೆ ಆನೆಯೊಂದು ದಾಳಿ ನಡೆಸಿದೆ. ಪರಿಣಾಮ, ಕಾರಿನಲ್ಲಿದ್ದ ಭರತ್, ಶರತ್, ಮಧು ಎಂಬುವರಿಗೆ ಗಾಯವಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಚಲಿಸುತ್ತಿದ್ದ ಕಾರಿನ ಮೇಲೆ ಆನೆ ದಾಳಿ..ಇಬ್ಬರ ಸ್ಥಿತಿ ಗಂಭೀರ
ಕಡೂರು ಅರಣ್ಯ ಇಲಾಖೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.