ಕರ್ನಾಟಕ

karnataka

ETV Bharat / state

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು - Elephant death in chikkamagaluru

ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಹಳೆ ಸಿದ್ದರಹಳ್ಳಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

By

Published : Dec 4, 2019, 4:58 AM IST

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡೂರು ತಾಲೂಕಿನ ಹಳೆ ಸಿದ್ದರಹಳ್ಳಿಯಲ್ಲಿ ಈ ದುರಂತ ನಡೆದಿದ್ದು, ಸುಮಾರು 20 ರಿಂದ 25 ವರ್ಷದ ಕಾಡಾನೆ ಸ್ಥಳದಲ್ಲಿಯೇ ಸಾವನ್ನಪ್ಪಿದೆ.

ಜೋಳದ ಹೊಲಕ್ಕೆ ಅಳವಡಿಸಿದ್ದಂತಹ ವಿದ್ಯುತ್ ತಂತಿಗೆ, ಒಂಟಿ ಸಲಗ ತಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಇನ್ನು ಕುರಿತು ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಸ್ಥಳಕ್ಕೇ ಆಗಮಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details