ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡಾನೆಗಳು ತೋಟಕ್ಕೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ಮಲೆನಾಡು ಭಾಗದ ಕಾಫಿ ತೋಟದ ಮಾಲೀಕರ ಮತ್ತು ಕೂಲಿ ಕಾರ್ಮಿಕರ ನಿದ್ದೆಗೆಡಿಸಿವೆ.
ಮಲೆನಾಡಿನಲ್ಲಿ ಮಿತಿಮೀರಿದ ಕಾಡಾನೆ ಹಾವಳಿ.. ಕಾಫಿ, ಬಾಳೆ ಬೆಳೆ ನಾಶ - kannadanews
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರಿದ್ದು, ರೈತರ ಬೆಳೆಗಳನ್ನು ನಾಶಮಾಡುತ್ತಿವೆ.
ಮಲೆನಾಡಿನಲ್ಲಿ ಮಿತಿಮೀರಿದ ಕಾಡಾನೆ ಹಾವಳಿ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ಎರಡು ಬೃಹತ್ ಕಾಡಾನೆಗಳು ಕಾಣಿಸಿಕೊಂಡಿದ್ದು ಕಾಫಿ ತೋಟಕ್ಕೆ ನುಗ್ಗಿ ಸಾಕಷ್ಟು ಪ್ರಮಾಣದ ಕಾಫಿ ಹಾಗೂ ಬಾಳೆಯನ್ನು ನಾಶ ಮಾಡಿ ಹೋಗಿವೆ. ಪದೇ ಪದೆ ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಈಗಾಲಾದರೂ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಥಳೀಯರು ಹಾಗೂ ಕಾಫಿ ತೋಟದ ಮಾಲೀಕರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.